ಮಂಡೆಕೋಲು: ಮಂಗಗಳ ಹಾವಳಿಯಿಂದ ತೆಂಗಿನ ಕೃಷಿ ಸಂಪೂರ್ಣ ಹಾಳಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಹಳದಿ ರೋಗದಿಂದ ಅಡಿಕೆ ಕೃಷಿ ಹಾಳಾಗುತಿದೆ ಇದಕ್ಕೆ ಪರಿಹಾರ ಬೇಕು ಎಂದು ಮಂಡೆಕೋಲಿನಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಕೇಳಿ ಬಂದ ಕೃಷಿಕರ ಬೇಡಿಕೆಯಾಗಿತ್ತು. ಮಂಗಗಳ ಹಾವಳಿಯ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತು. ಇದರ ಪರಿಹಾರದ ಬಗ್ಗೆ ಅಧಿಕಾರಿಗಳಿಂದ ಹಾಗು
ಮಂಡೆಕೋಲಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ-115 ಅರ್ಜಿ ಸ್ವೀಕಾರ
The Sullia Mirror YouTube channel
Watch and subscribe
ಕೃಷಿಕರಿಂದ ಅಭಿಪ್ರಾಯಗಳನ್ಬು ಜಿಲ್ಲಾಧಿಕಾರಿಗಳು ಕೇಳಿದರು. ತೋಟಗಾರಿಕೆ ಹಾಗು ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪರಿಹಾರ ಕ್ರಮದ ಬಗ್ಗೆ ಯೋಜನೆ ರೂಪಿಸುವುದಾಗಿ ಡಾ.ರಾಜೇಂದ್ರ ಕೆ.ವಿ. ಹೇಳಿದರು. ಅದರಂತೆ ಅಡಿಕೆ ಹಳದಿ ರೋಗದ ಬಗ್ಗೆ ಸಂಶೋಧನೆಗೆ ಸರಕಾರ ಅನುದಾನ ಬಿಡುಗಡೆ ಮಾಡಿದೆ. ಸಂಶೋಧನೆ ನಡೆಸಿ ಕಾರಣಗಳನ್ನು ಕಂಡು ಹುಡುಕಿ ಔಷಧಿ ಕಂಡು ಹುಡುಕುವ ಪ್ರಯತ್ನ ನಡೆಯುತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗ್ರಾಮ ವಾಸ್ತವ್ಯದಲ್ಲಿ ಜನರು ಮುಂದಿರಿಸಿದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ನೀಡಿದರು. 115 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದ್ದದ್ದಾರೆ.ವಿವಿಧ ವೈಯುಕ್ತಿಕ ಸಮಸ್ಯೆಗಳು ಸೇರಿದಂತೆ 70 ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗಿದೆ. 30 ಅರ್ಜಿಗಳಲ್ಲಿ ಅರಣ್ಯ ಕಂದಾಯ ಇಲಾಖೆಗಳು ಜಂಟಿಯಾಗಿ ಪರಿಶೀಲನೆ

ಮಾಡಬೇಕಾಗಿದೆ. ಆದುದರಿಂದ ಅದಕ್ಕೆ ಪರಿಹಾರ ನೀಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ತಿಳಿಸಿದ್ದಾರೆ. ವಿವಿಧ ರಸ್ತೆ ಸಮಸ್ಯೆಗಳು, ಕುಡಿಯುವ ನೀರಿನ ಸಮಸ್ಯೆ, ಮನೆ ನಿವೇಶನ, ಮನೆ ಮಂಜೂರು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಹವಾಲು ಮುಂದಿರಿಸಿದರು. ವೈಯುಕ್ತಿಕ ಸಮಸ್ಯೆಗಳು ಸೇರಿ ಬಹುತೇಕ ಸಮಸ್ಯೆಗಳ ಪರಿಹಾರಕ್ಕೆ ಡಿಸಿ ಸ್ಥಳದಲ್ಲಿಯೇ ನಿರ್ದೇಶನ ನೀಡಿದರು. ಗ್ರಾಮದ ಆರಾಧನಾಲಯಗಳು, ಶಾಲೆ ಸೇರಿ ಮಂಡೆಕೋಲು ಗ್ರಾಮದಲ್ಲಿ ವಿವಿಧ ಕಡೆಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿಸರು. ನಿನ್ನೆ ರಾತ್ರಿ ನಡೆದ ಚಾವಡಿ ಚರ್ಚೆ ಬಹಳ ಖುಷಿ ಕೊಟ್ಟಿದೆ ಮತ್ತು ಪರಿಣಾಮಕಾರಿಯಾಗಿತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಯಿತು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹೇಳಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪಾತಿಕಲ್ಲು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್, ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಕುಮಾರ್, ಭೂದಾಖಲೆಗಳ ಉಪನಿರ್ದೇಶಕ ನಿರಂಜನ ಎಂ.ಎಂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಮಂಜುಳಾ,ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ,
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನಿಲ್ ತೋಟಪ್ಪಾಡಿ, ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಸದಾನಂದ ಮಾವಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಹಶೀಲ್ದಾರ್ ಅನಿತಾಲಕ್ಷ್ಮಿ ಸ್ವಾಗತಿಸಿದರು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ ವಂದಿಸಿದರು. ದಯಾನಂದ ಪತ್ತುಕುಂಜ ಕಾರ್ಯಕ್ರಮ ನಿರೂಪಿಸಿದರು.
ಡೆಪ್ಯುಟಿ ತಹಶೀಲ್ದಾರ್ ಚಂದ್ರಕಾಂತ ಎಂ.ಆರ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ವಲಯ ಅರಣ್ಯಾಧಿಕಾರಿ ಆರ್. ಗಿರೀಶ್, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ನಿತಿನ್ ಪ್ರಭು, ಮೆಸ್ಕಾಂ ಎಇಇ ಹರೀಶ್ ನಾಯ್ಕ್, ಜಿಪಂ ಇಂಜಿನಿಯರಿಂಗ್ ಉಪವಿಭಾಗದ ಎಇಇ ಹನುಮಂತರಾಯಪ್ಪ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನ, ನ.ಪಂ.ಮುಖ್ಯಾಧಿಕಾರಿ ಸುಧಾಕರ್,ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಮತ್ತಿತರ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.