ಸುಳ್ಯ:ಸುಳ್ಯ ಶಾಂತಿನಗರದಲ್ಲಿ ನಡೆಯುತ್ತಿರುವ ತಾಲೂಕು ಕ್ರೀಡಾಂಗಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವೀಕ್ಷಣೆ ಮಾಡಿದರು. ಕ್ರೀಡಾಂಗಣ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು. ಕ್ರೀಡಾಂಗಣದ ಕಾಮಗಾರಿ ನಡೆಸಿ ಕೆಳ ಭಾಗದಲ್ಲಿ ಹಾಕಿದ ಮಣ್ಣಿನಿಂದ ನೀರು ಹಾಗೂ ಮಣ್ಣು ಕೊಚ್ಚಿ ಹೋಗುವ ಬಗ್ಗೆ ಹಾಗೂ ಮಣ್ಣು ಕುಸಿಯುವ ಆತಂಕವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿಗಳು ಕೆಳ ಭಾಗದಲ್ಲಿ
ಈಗ ಇರುವ ತಡೆಗೋಡೆ ಎತ್ತರಿಸಿ ಸೂಕ್ತವಾದ ನೆಲೆಯಲ್ಲಿ ತಡೆಗೋಡೆ ನಿರ್ಮಾಣ ಮಾಡಲು ನಿರ್ದೇಶನ ನೀಡಿದರು. 10 ಲಕ್ಷ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ನಡೆಸಲು ನಿರ್ಮಿತಿ ಕೇಂದ್ರದ ಇಂಜಿನಿಯರ್ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಕ್ರೀಡಾಂಗಣದ ಸುತ್ತ ನೀರು ಹರಿಯುವುದಕ್ಕೆ ಸೂಕ್ತವಾದ ವ್ಯವಸ್ಥೆ ಮಾಡುವಂತೆ ಅವರು ಇಂಜಿನಿಯರ್ಗಳಿಗೆ ಸೂಚನೆ ನೀಡಿದರು. ನಿರ್ಮಿತಿ ಕೇಂದ್ರದ ಇಂಜಿನಿಯರ್ ಹರೀಶ್ ಮೆದು ಕಾಮಗಾರಿಯ ವಿವರ ನೀಡಿದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್,ಪುತ್ತೂರು ಸಹಾಯಕ ಕಮೀಷನರ್ ಮಹೇಶ್ ಚಂದ್ರ, ತಹಶೀಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಎಸ್ಐ ಈರಯ್ಯ ದೂಂತೂರು, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ವಿಎ ತಿಪ್ಪೇಶ್, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಶರೀಫ್ ಕಂಠಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಮೂಸಾ ಕುಂಞಿ ಪೈಂಬೆಚ್ಚಾಲ್, ಡಾ.ಸುಂದರ್ ಗೌರಿಶಂಕರ ನವನೀತ ಬೆಟ್ಟಂಪಾಡಿ, ಗೌರಿಶಂಕರ ಮತ್ತಿತರರು ಉಪಸ್ಥಿತರಿದ್ದರು.
ಕೆಳ ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡುವುದು ಅತೀ ಅಗತ್ಯ ಎಂದು ಸ್ಥಳೀಯರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.