ಸುಳ್ಯ: ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ. ಎಂ ಶಹೀದ್ ತೆಕ್ಕಿಲ್ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಗ್ರಾಮದ ಸಮಸ್ಯೆಗಳ ಬಗ್ಗೆ ತಿಳಿಸಿ ಸಂಪಾಜೆ ಗ್ರಾಮಕ್ಕೆ ಭೇಟಿ ನೀಡುವಂತೆ ವಿನಂತಿ ಮಾಡಿದರು.
ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಎಸ್. ಕೆ. ಹನೀಫ್, ರಹೀಮ್ ಬೀಜದಕಟ್ಟೆ, ನ.ಪಂ.ಸದಸ್ಯ ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ ಮತ್ತಿತರರು ಇದ್ದರು.