ಸುಳ್ಯ:ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘಕ್ಕೆ 2024 -25ನೇ ಸಾಲಿನ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಐ. ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ಅವರನ್ನು
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ : ಎಂ ಎನ್.ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಎಸ್ ಶಂಸುದ್ದಿನ್ ನಿರ್ದೇಶಕರಾದ ಕೆ. ಎಂ. ಹಮೀದ್ ಅಲ್ಫ ಬೆಳ್ಳಾರೆ ಜಿಲ್ಲಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ಬಾಲ್ಯೊಟೂ ನಿರ್ದೇಶಕರಾದ ಎಸ್. ಬಿ.ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ ಎಸ್.ಎನ್. ಮನ್ಮಥ. ಎಚ್. ಎನ್. ರಮೇಶ್ ಸಹಕಾರ ಸಂಘಗಳ ಉಪ ನಿಬಂಧಕರು ದ ಕ ಜಿಲ್ಲೆ ಮೊದಲಾದವರು ಉಪಸ್ಥಿತರಿದ್ದರು












