ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹಿರಿಯ ಬಿಜೆಪಿ ಮುಖಂಡ ಎಸ್.ಎನ್.ಮನ್ಮಥ ಆಯ್ಕೆಯಾಗಿದ್ದಾರೆ. ಮಾ.11ರಂದು ಎಸ್ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ. ಇಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ. ಮಾ.1ರಂದು ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಎಸ್ಸಿ ಡಿಸಿಸಿ ಬ್ಯಾಂಕ್ ಚುನಾವಣಾ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆಸಿ ಎಸ್.ಎನ್.ಮನ್ಮಥ ಅವರನ್ನು ಅಭ್ಯರ್ಥಿಯಾಗಿಸಲು ನಿರ್ಧರಿಸಲಾಗಿತ್ತು. ಇಂದು ನಾಮಪತ್ರ ಸಲ್ಲಿಸಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಸದಸ್ಯ ಸೇರಿ ಹಲವು ಹುದ್ದೆಗಳನ್ನು ಅಲಂಕರಿಸಿರುವ ಎಸ್.ಎನ್.ಮನ್ಮಥರು ಪ್ರಸ್ತುತ ಐವರ್ನಾಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.







