ಸುಳ್ಯ:ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘಕ್ಕೆ 2025 -26ನೇ ಸಾಲಿನ ದ .ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ. ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಐ. ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ
ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ರವರನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ ಎನ್.ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಅಭಿನಂದಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ಬಾಲ್ಯೊಟೂ ನಿರ್ದೇಶಕರಾದ ಎಸ್. ಬಿ.ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ ಎಸ್.ಎನ್. ಮನ್ಮಥ. ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್. ಯನ್. ರಮೇಶ್, ಅಲ್ಪ ಸಂಖ್ಯಾತರ ಸಹಕಾರ ಸಂಘ ದ ಸದಸ್ಯರಾದ ಪೈಝಲ್ ಜಿರ್ಮುಕ್ಕಿ ಮೊದಲಾದವರು ಉಪಸ್ಥಿತರಿದ್ದರು.








