ನವದೆಹಲಿ:ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (ಡಿಸಿಸಿ) ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್.ಪೂಜಾರಿ ನೇಮಕಗೊಂಡಿದ್ದಾರೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ನೂತನ
ಜಿಲ್ಲಾ ಅಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.ಸಂಘಟನೆ ಸೃಜನ್ ಅಭಿಯಾನ’ದಡಿ, ಪ್ರತಿಯೊಂದು ಜಿಲ್ಲೆಗೆ ನಿಯೋಜಿತರಾಗಿದ್ದ ಎಐಸಿಸಿ ವೀಕ್ಷಕರು ಸಮಗ್ರ ಪರಿಶೀಲನೆ ನಡೆಸಿ, ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ವರದಿ ಸಲ್ಲಿಸಿದ್ದರು.
ಈ ವರದಿ ಆಧಾರದ ಮೇಲೆ ಪ್ರತಿಯೊಬ್ಬ ವೀಕ್ಷಕರೊಂದಿಗೆ ಮತ್ತು ಹಿರಿಯ ನಾಯಕರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿ ಅಂತಿಮ ಪಟ್ಟಿಯನ್ನು ಆಖೈರುಗೊಳಿಸಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಪದ್ಮರಾಜ್ ಆರ್ ಪೂಜಾರಿ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದ.ಕ.ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.









