ಮಂಗಳೂರು:ಜನರ ಸಹ ಬಭಾಗಿ ತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ.ಈ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದಕ್ಕೆ ಹಾಗೂ ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಮೂಲಕ ಗಿಡಗಳ ವಿತರಣೆ ಆರ್ಥಿಕ ನೆರವನ್ನು ಕೃಷಿಕರಿಗೆ ನೀಡಲಾ ಗುತ್ತಿದೆ. ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.
ಅವರು ಮಂಗಳೂರು ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಮಾಧ್ಯಮ ಸಂವಾದದಲ್ಲಿ ವಿವರಿಸಿದರು.ರೈತರಿಗೆ
ತಮ್ಮ ಜಮೀನಿನಲ್ಲಿ ಗಿಡ ಬೆಳೆಸಲು ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆಯ 9ನರ್ಸರಿಗಳಲ್ಲಿ ಮತ್ತು ಸಾಮಾಜಿಕ ಅರಣ್ಯ ವಿಭಾಗದ 5ನರ್ಸರಿಗಳ ಮೂಲಕ ಸುಮಾರು 30 ವಿವಿಧ ರೀತಿಯ ಸಸ್ಯಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಒಬ್ಬ ರೈತನಿಗೆ ಗರಿಷ್ಠ ಒಂದು ಹೆಕ್ಟೇರ್ ಗೆ 400 ಸಸಿ ವಿತರಿಸುವ ಯೋಜನೆ ಇದೆ.ಕೃಷಿ ಅರಣ್ಯ ವಿಕಾಸ ಯೋಜನೆಯಲ್ಲಿ ಪ್ರತಿ ಗಿಡ ನೆಟ್ಟು ಸಂರಕ್ಷಣೆ ಮಾಡಲು 125 ರೂಪಾಯಿ ಆರ್ಥಿಕ ನೆರವು ರೈತರಿಗೆ ನೀಡಲಾಗುತ್ತದೆ. ನರೇಗಾ ದಲ್ಲೂ ಗಿಡ ನೆಡಲು ಸಹಾಯ ನೀಡಲಾಗುತ್ತದೆ. ಕಳೆದ ವರ್ಷ 7,79,000 ಗಿಡಗಳನ್ನು ಅರಣ್ಯದಲ್ಲಿ,35,600ಗಿಡಗಳನ್ನು ಅರಣ್ಯೇತರ ಕಡೆಗಳಲ್ಲಿ ನೆಡಲಾಗಿದೆ. 4,41,000 ಗಿಡಗಳನ್ನು ರೈತರಿಗೆ ನೀಡಲಾಗಿದೆ.2024-25 ರಲ್ಲಿ 5ಲಕ್ಷ ಸಸಿ ನೆಡುವ ಯೋಜನೆ ಇದೆ.ಈ ರೀತಿಯ ಪ್ರತಿ ವರ್ಷ ಸುಮಾರು 7ಲಕ್ಷ ಗಿಡಗಳನ್ನು ನೆಡಲಾಗುತ್ತಿದೆ. ಆದರೆ ರಸ್ತೆ ಕಟ್ಟಡ ಇನ್ನಿತರ ಅಭಿವೃದ್ಧಿ ಯೋಜನೆಗಳ ಸಂದರ್ಭದಲ್ಲಿ ಪ್ರತಿ ವರ್ಷ ಸಾಕಷ್ಟು ಮರಗಳ ನಾಶವಾ ಗುತ್ತದೆ.ಕಳೆದ ವರ್ಷ ಈ ರೀತಿ 1,70,000 ಸಾವಿರ ಮರಗಳನ್ನು ತೆರವುಗೊಳಿಸ ಬೇಕಾಯಿತು. ಸುಮಾರು 3ಸಾವಿರ ಮರಗಳನ್ನು ಅಪಾಯವನ್ನು ತಪ್ಪಿಸಲು ತೆರವುಗೊಳಿಸ ಬೇಕಾಯಿತು. ಆದರೂ ಶೇ 33ರಷ್ಟು ಅರಣ್ಯ ವನ್ನು ಸಂರಕ್ಷಿಸುವುದು ಅನಿವಾರ್ಯ ವಾಗಿದೆ ಎಂದು ಮರಿಯಪ್ಪ ಹೇಳಿದರು.
ಕಾಡು ಪ್ರಾಣಿ ಗಳ ಹಾವಳಿ ತಡೆಗೆ ಹಣ್ಣಿನ ಮರಗಳ ತೋಪು:-ಕಾಡು ಪ್ರಾಣಿ ಗಳು ಮುಖ್ಯ ವಾಗಿ ಆನೆಗಳ ಹಾವಳಿ ತಡೆಯಲು ಕಾಡಿನಲ್ಲಿ ಅಕೇಶಿಯ ಮರಗಳನ್ನು ತೆರವುಗೊಳಿಸಿ ಹಣ್ಣಿನ ಮರಗಳನ್ನು ಬೆಳೆಸಲಾಗುತ್ತಿದೆ.ಇದುವರೆಗೆ ಸುಮಾರು 900 ಹೆಕ್ಟೇರ್ ಅಕೇಶಿಯ ಮರಗಳ ತೋಪು ತೆರವುಗೊಳಿಸಿ ಮರಗಳನ್ನು ಬೆಳೆಸಲಾಗಿದೆ. ಆನೆಗಳ ತಡೆಗೆ ಸೋಲಾರ್ ಬೇಲಿ ಸೇರಿದಂತೆ ಜನವಸತಿಗೆ ನುಗ್ಗದಂತೆ ತಡೆಗಳನ್ನು ನಿರ್ಮಿಸಲಾಗಿದೆ. ಆನೆಗಳ ಪಥ ಹಲವಾರು ವರ್ಷ ಗಳಿಂದ ಒಂದೆ ಆಗಿರುತ್ತದೆ.ರಸ್ತೆ ಇತರ ಕಾಮಗಾರಿಯ ಸಂದರ್ಬದಲ್ಲಿ ಈ ಪಥ ಬದಲಾದರೆ ಆನೆಗಳು ಗೊಂದಲಕ್ಕೆ ಒಳಗಾಗಿ ಹೊಸ ದಾರಿ ಹುಡುಕುತ್ತವೆ .ಇದರಿಂದ ಸಾಕಷ್ಟು ಬಾರಿ ಅವುಗಳು ನಾಡಿಗೆ ನುಗ್ಗಿದ ಉದಾಹರಣೆಗಳಿವೆ.ಕಳೆದ 2023-24ರಲ್ಲಿ ಆನೆ ದಾಳಿಯಿಂದ ನಾಲ್ಕು ಜೀವ ಹಾನಿಯಾಗಿದೆ. 2024-25ರಲ್ಲಿ ಯಾವುದೇ ಜೀವ ಹಾನಿ ಯಾಗಿಲ್ಲ . ಆನೆ,ಕಡವೆ, ಮಂಗ ಗಳು ಸೇರಿದಂತೆ ಕಾಡು ಪ್ರಾಣಿಗಳಿಂದ ಬೆಳೆ ಹಾನಿಯಾದರೆ ಅವರಿಗೆ ಪರಿಹಾರ ನೀಡುವ ಯೋಜನೆ ಇದೆ ಎಂದು ಡಿಸಿಎಫ್ ತಿಳಿಸಿದರು.
ಚಾರಣ ಪ್ರೀಯರಿಗೆ ಆನ್ ಲೈನ್ ಮೂಲಕ ಬುಕ್ ಮಾಡಿ ಹೋಗಲು ಅವಕಾಶವಿದೆ. ಅರಣ್ಯದ ಕಾನೂನಿನಲ್ಲಿ ನೀಡಲಾದ ವಿನಾಯಿತಿಗಳ ಹೊರತಾಗಿ ಇನ್ನಿತರ ಚಟುವಟಿಕೆಗಳಿಗೆ ಮಾತ್ರ ಇಲಾಖೆ ಅನುಮತಿ ನೀಡುವುದಿಲ್ಲ. ಅರಣ್ಯ ಸಂರಕ್ಷಣೆಯ ಹಿನ್ನೆಲೆಯಲ್ಲಿ ಈ ನಿಯಮ ರೂಪಿಸಲಾಗಿದೆ ಎಂದು ಡಿಸಿಎಫ್ ಎ.ಮರಿಯಪ್ಪ ವಿವರಿಸಿದರು.
ಮಾಧ್ಯಮ ಸಂವಾದದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,ಪ್ರೊಬೆಷನರಿ ಐಎಫ್ ಎಸ್ ಅಧಿಕಾರಿ ಅಕ್ಷಯ್ ಪ್ರಕಾಶ್ಕರ್,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಸಾಂಕೇತಿಕ ವಾಗಿ ಗಿಡಗಳನ್ನು ವಿತರಿಸಲಾಯಿತು.