ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಫೆಬ್ರವರಿ 6 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಫೆಬ್ರವರಿ 6 ರಂದು ಮಧ್ಯಾಹ್ನ 1:40- ಮಂಗಳೂರು ವಿಮಾನ ನಿಲ್ದಾಣ ಆಗಮನ, 3:30ಕ್ಕೆ
ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀ ಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ ಆಯೋಜಿಸಿರುವ ನೂತನ ಸಂಗೀತ ಕಲಾ ಶಾಲೆ, ಸಭಾಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆ ಹಾಗೂ 72ನೇ ವರ್ಷದ ಕಾಂಚನೋತ್ಸವ ಕಾರ್ಯಕ್ರಮ, ಸಂಜೆ 6- ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮ, ರಾತ್ರಿ ನಗರದಲ್ಲಿ ವಾಸ್ತವ್ಯ.ಫೆಬ್ರವರಿ 7 ರಂದು ಬೆಳಿಗ್ಗೆ 9:40- ಉಪಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.







