ಬೆಂಗಳೂರು:ರಾಜ್ಯದಲ್ಲಿ ದೀಪಾವಳಿ ಸಂದರ್ಭದಲ್ಲಿ ಹಗಲಿನಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದ್ದು,ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿಗಳ ಸಿಡಿಸಲು ಅವಕಾಶವಿದೆ. ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ನಿಷೇಧಿತ ಪಟಾಕಿಗಳ
ಸಂಗ್ರಹ, ಮಾರಾಟ ಮಾಡಿದರೆ ಅಂತಹವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.ಪರಿಸರಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯವನ್ನು ವೈಜ್ಞಾನಿಕ ವಿಲೇವಾರಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.









