ಸುಳ್ಯ:ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್
ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರ ನೇತೃತ್ವದಲ್ಲಿ ಸುಳ್ಯ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ಸಲೀಂ ಪೆರಂಗೋಡಿ, ಸುಳ್ಯ ತಾಲೂಕು ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೋ, ಯುವ ಕಾಂಗ್ರೆಸ್ ಸುಳ್ಯ ನಗರ ಉಪಾಧ್ಯಕ್ಷ ಮನ್ಸೂರ್ ಮೆಟ್ರೋ, ಶಂಸುದ್ದಿನ್ ಹಾಗೂ ಫಾರೂಕ್ ಅವರು ದೆಹಲಿ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿದರು.









