ಡೆಹ್ರಾಡೂನ್:ಉತ್ತರಾಖಂಡದ ವಿವಿಧೆಡೆ ಸೋಮವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದೆ. ಡೆಹ್ರಾಡೂನ್ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿದೆ.ಬೆಳಗ್ಗೆ ಭಾರಿ ಮೇಘಸ್ಫೋಟ ಸಂಭವಿಸಿ ಪರಿಣಾಮ ತಮ್ಸಾ ನದಿ ಉಕ್ಕಿ ಹರಿದಿದ್ದು, ಹಲವು ಮನೆಗಳು, ಅಂಗಡಿ ಮುಂಗಟ್ಟುಗಳು, ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸೋಮವಾರ ತಡರಾತ್ರಿ ಡೆಹ್ರಾಡೂನ್ನ
ಸಹಸ್ರಧಾರದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಅಂಗಡಿಗಳು ಹಾನಿಗೊಳಗಾಗಿವೆ. ಹಲವರುನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು, ಮನೆಗಳು, ಅಂಗಡಿಗಳು ಹಾನಿಗೊಂಡಿವೆ.ಡೆಹ್ರಾಡೂನ್ನ ಸಹಸ್ರಧಾರ, ಮಾಲ್ ದೇವತಾ ಮತ್ತು ಮಸ್ಸೂರಿಯಲ್ಲಿ ಹಾನಿ ಉಂಟಾಗಿದೆ.ಪ್ರಹಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯ ನಡೆಯುತ್ತಿದ್ದು, 300ರಿಂದ 400ರಷ್ಟು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ವರದಿಯಾಗಿದೆ.ನೀರಿನ ಮಟ್ಟ ದಿಢೀರ್ ಏರಿಕೆಯಾದ ಪರಿಣಾಮ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ನೈನಿತಾಲ್ನಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೂಚಿಸಿದ್ದಾರೆ.ಡೆಹ್ರಾಡೂನ್ಲ್ಲಿ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿರುವ ಸಿಎಂ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಜೊತೆಗಿದ್ದರು.ಜಿಲ್ಲಾಡಳಿತ, ಎಸ್ಡಿಆರ್ಎಫ್ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.





