ನವದೆಹಲಿ: ಉತ್ತರಾಖಂಡದಲ್ಲಿ ಮೊದಲ ವಂದೇ ಭಾರತ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ದೇಶೀಯವಾಗಿ ನಿರ್ಮಿಸಲಾದ ಡೆಹ್ರಾಡೂನ್-ದೆಹಲಿ ವಂದೇ ಭಾರತ್ ರೈಲನ್ನು ಪ್ರಧಾನಿ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಉತ್ತರಾಖಂಡ
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್ ರೈಲು ನಿಲ್ದಾಣದಲ್ಲಿ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.ಈ ವಂದೇ ಭಾರತ್ ರೈಲು ಡೆಹ್ರಾಡೂನ್ ಮತ್ತು ದೆಹಲಿ ನಡುವೆ ಓಡಲಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ಕವಚ ತಂತ್ರಜ್ಞಾನ ಸೇರಿದಂತೆ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಓಡಲಿದೆ.
ಉತ್ತರಾಖಂಡ ರೈಲು ಹಳಿಗಳ 100 ಪ್ರತಿಶತದಷ್ಟು ವಿದ್ಯುದೀಕರಣ ಪೂರ್ಣಗೊಂಡಿದೆ. ಪ್ರಧಾನಿ ಮೋದಿ ಅವರು ಉತ್ತರಾಖಂಡದಲ್ಲಿ ನೂತನವಾಗಿ ವಿದ್ಯುದ್ದೀಕರಿಸಿದ ರೈಲು ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.