ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.
8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು ಇತ್ತೀಚಿನ ವರದಿ ಬಂದಾಗ ಸರಳ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ
ಬಿಜೆಪಿ ಮುನ್ನಡೆಯಲ್ಲಿದೆ.ಆಡಳಿತಾರೂಢ ಆಮ್ ಆದ್ಮಿ ಪಾರ್ಟಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ 2 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಆರಂಭಿಕ ಸೂಚನೆ ಅನ್ವಯ ಆಮ್ ಆದ್ಮಿ ಪಕ್ಷದ ಮುಖಂಡ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮುಖ್ಯಮಂತ್ರಿ ಅತಿಷಿ, ಮನೀಶ್ ಸಿಸೋಡಿಯ ಹಿನ್ನಡೆಯಲ್ಲಿದ್ದಾರೆ. ಮತ ಎಣಿಕೆಗೆ ಭಾರೀ ಭದ್ರತಾ ವ್ಯವಸ್ಥೆ ಏರ್ಪಡಿಸಲಾಗಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆ.5ರಂದು ಮತದಾನ ನಡೆದಿತ್ತು. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿತ್ತು.