ನವದೆಹಲಿ: ಫೆ.8 ರಂದು ಶನಿವಾರ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೇಂದ್ರಗಳ ಬಳಿ ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸರು ಸೇರಿದಂತೆ ಮೂರು ಹಂತದ ಭದ್ರತಾ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು
ಅಧಿಕಾರಿಗಳು ತಿಳಿಸಿದ್ದಾರೆ.ನಾಳಿನ ಮತ ಎಣಿಕೆಗಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದು ವಿಶೇಷ ಪೊಲೀಸ್ ಆಯುಕ್ತ ದೇವೇಶ್ ಚಂದ್ರ ಶ್ರೀವಾಸ್ತವ ಹೇಳಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆ.5ರಂದು ಮತದಾನ ನಡೆದಿತ್ತು. ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.