ನವದೆಹಲಿ: ದೇಶದ ಗಮನ ಸೆಳೆದಿರುವ ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಬುಧವಾರ ಮುಕ್ತಾಯಗೊಂಡಿದ್ದು, ಈ ಬಾರಿ ಬಿಜೆಪಿ ಸರಳ ಬಹುಮತದ ಗಡಿ ದಾಟಿ ಅಧಿಕಾರಕ್ಕೇರಲಿದ್ದರೆ, ಆಡಳಿತಾರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.ಎರಡು ಚುನಾವಣೋತ್ತರ
ಸಮೀಕ್ಷೆಗಳು ಮಾತ್ರ ಆಮ್ ಆದ್ಮಿ ಪಕ್ಷ (ಎಎಪಿ) ವಿಜಯಶಾಲಿಯಾಗಿ, ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದಿವೆ. ‘ಇಂಡಿಯಾ’ ಮೈತ್ರಿಕೂಟದ ಅಂಗಪಕ್ಷವೂ ಆಗಿರುವ ಕಾಂಗ್ರೆಸ್ ಉತ್ತಮ ಸಾಧನೆ ಮಾಡುವಲ್ಲಿ ಮತ್ತೆ ವಿಫಲಗೊಳ್ಳಲಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚಿಸಲು ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ಇರುವುದನ್ನು ಬಹುತೇಕ ಸಮೀಕ್ಷೆಗಳು ಹೇಳಿವೆ.ಫೆಬ್ರುವರಿ 8ರಂದು ಮತ ಎಣಿಕೆ ನಡೆಯಲಿದ್ದು,
1.55 ಕೋಟಿ ಅರ್ಹ ಮತದಾರರಿದ್ದು, ಶೇ 60ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ ಎಎಪಿ 62, ಬಿಜೆಪಿ 8 ಶಾಸಕರನ್ನು ಹೊಂದಿವೆ.