ನವದೆಹಲಿ: 70 ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಒಟ್ಟು 841 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.ದೆಹಲಿ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಗುರುವಾರ 500 ಅಭ್ಯರ್ಥಿಗಳು ನಾಮಪತ್ರಸಲ್ಲಿಸಿದ್ದಾರೆ. ಈ ಮೂಲಕ
ಒಟ್ಟು 841 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.
ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಎದುರಾಳಿಯಾಗಿ ಕಾಂಗ್ರೆಸ್ನಿಂದ ಸಂದೀಪ್ ದೀಕ್ಷಿತ್ ಸ್ಪರ್ಧಿಸುತ್ತಿದ್ದಾರೆ.ಎಎಪಿ ನಾಯಕ ಮನೀಶ್ ಸಿಸೋಡಿಯಾ ಜಂಗ್ಪುರ ಕ್ಷೇತ್ರದಿಂದ, ಗೋಪಾಲ್ ರೈ ಬಾಬರ್ಪುರದಿಂದ ಮತ್ತು ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ನಿಂದ ಸ್ಪರ್ಧಿಸಿದರೆ, ಎಐಎಂಐಎಂ ಅಭ್ಯರ್ಥಿಯಾಗಿರುವ ಎಎಪಿ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಅವರು ಮುಸ್ತಫಾಬಾದ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.ದೆಹಲಿ ವಿಧಾನಸಭೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8 ರಂದು ಮತ ಎಣಿಕೆ ನಡೆಯಲಿದೆ.