ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಸರಳ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಪಡೆದ ಹಿನ್ನಲೆಯಲ್ಲಿ ಬಿಜಪಿ
ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸಿಹಿ ಹಂಚಿ ಖುಷಿ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ 45, ಎಎಪಿ 24 ಹಾಗೂ ಕಾಂಗ್ರೆಸ್ 1 ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್, ಮನೀಷ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಹಿನ್ನಡೆಯಲ್ಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ನಿಶ್ಚಿತ ಎಂದು ದೆಹಲಿ ಬಿಜೆಪಿ ಅಧ್ಯಕ್ಷ
ವೀರೇಂದ್ರ ಸಚ್ದೇವ ಹೇಳಿದ್ದಾರೆ.