ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದರು ಧರಣಿ ಕುಳಿತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹಾಗೂ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೊಚ್ ಜನತಾ ಪಕ್ಷದ (ಸಿಜೆಪಿ) ಜೂನ್ 20ರಿಂದ ಪ್ರತಿಭಟನೆ ನಡೆಸುತ್ತಿದೆ. ಸಿಜೆಪಿ ನಡೆಯುತ್ತಿದ್ದ ‘ಸಂಸತ್ ಚಲೊ’ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.ಇದನ್ನು ಖಂಡಿಸಿ, ರಾಹುಲ್ ಗಾಂಧಿ, ಕರ್ನಾಟಕ ಮಹಾಗೂ ಕೇರಳ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಇಂದು ಮಧ್ಯಾಹ್ನದ ಬಳಿಕ ಧರಣಿ ಆರಂಭವಾಗಿತ್ತು. ಅಖಿಲೇಶ್ ಕೂಡ ಸಾಥ್ ನೀಡಿದ್ದರು.ಸ್ಥಳಕ್ಕೆ ಬಂದ ಪೊಲೀಸರು, ಧರಣಿ ಕುಳಿತಿದ್ದ ನಾಯಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.








