ಸುಳ್ಯ:ಸುಳ್ಯ ತಾಲೂಕಿನಲ್ಲಿ ವ್ಯಾಪಕವಾಗಿ ಡೆಂಗಿ ಜ್ವರ ಹರಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಜುಲೈ 10ರಂದು ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಸಭೆಯಲ್ಲಿ
ಡೆಂಗಿ ಜ್ವರ ಹರಡಿರುವ ಬಗ್ಗೆ ತೆಗೆದುಕೊಳ್ಳಬೇಕಾದ ಹಾಗೂ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಮತ್ತು ಡೆಂಗಿ ಜ್ವರ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಾಗುವುದು ಎಂದು ಶಾಸಕರು ‘ಸುಳ್ಯ ಮಿರರ್’ಗೆ ತಿಳಿಸಿದ್ದಾರೆ.
ತಾಲೂಕಿನಲ್ಲಿ ಡೆಂಗಿ ಜ್ವರ ವ್ಯಾಪಕವಾಗಿ ಹರಡುತ್ತಿರುವ ಕುರಿತು ‘ಸುಳ್ಯ ಮಿರರ್ ಜು.8 ರಂದು’ ವಿಶೇಷ ವರದಿ ಪ್ರಕಟಿಸಿತ್ತು.