ದೇವಚಳ್ಳ:ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಇಲಾಖೆ ,ಭಾರತೀಯ ಅಂಚೆ ಇಲಾಖೆ ಪುತ್ತೂರು ,ಚಿರಾಯು ಸ್ಪೋರ್ಟ್ಸ ಢರ್ಟ್ಸ್ ಕ್ಲಬ್ ಮಾವಿನಕಟ್ಟೆ ,ಅಮರ ಸಂಘಟನಾ ಸಮಿತಿ ರಿಜಿಸ್ಟರ್ ಸುಳ್ಯ, ಗ್ರಾಮ ವನ್ ಮಾವಿನಕಟ್ಟೆ ,ಮತ್ತು ಒಡಿಯೂರು ಸ್ವಸಹಾಯ ಸಂಘ ದೇವಚಲ್ಲ ಇವರುಗಳ ಜಂಟಿ ಆಶ್ರಯದಲ್ಲಿ
ಬೃಹತ್ ರಕ್ತದಾನ ಶಿಬಿರ ,ಆರೋಗ್ಯ ತಪಾಸಣಾ ಶಿಬಿರ, ಆಧಾರ ಕಾರ್ಡು ಪರಿಸ್ಕರಣೆ ,ಈ ಶ್ರಮ ಕಾರ್ಡ್ ನೋಂದಣಿ ಮತ್ತು ಹಿರಿಯರ ಗುರುತು ಚೀಟಿ ನೋಂದಣಿ ಕಾರ್ಯಕ್ರಮವು ದೇವಚಳ್ಳ ಗ್ರಾಮ ಪಂಚಾಯತ್ ವಟ್ಟಾರದಲ್ಲಿ ಜರುಗಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವಹಿಸಿದ್ದು ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕುಲದೀಪ್ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷರು ಹಾಗೂ ಬ್ಲಡ್ ಬ್ಯಾಂಕಿನ ಮುಖ್ಯಸ್ಥರಾ ಜಯರಾಜ್ ಭಂಡಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸುಳ್ಯ ಲಯನ್ಸ್ ಕ್ಲಬ್ನ ಅಧ್ಯಕ್ಷ ವೀರಪ್ಪಗೌಡ ಕಣ್ಕಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿಸರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ 103ನೇ ಬಾರಿ ರಕ್ತದಾನ ಮಾಡುತ್ತಿರುವ ಶೈಲೇಶ್ ಅಂಬೆಕಲ್ಲು ಅವರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ಚಿರಾಯು ಸ್ಪೋರ್ಟ್ಸ್ ಅಂಡ್,ಚಿರಾಯು ಸ್ಪೋರ್ಟ್ಸ್ ಎಂಡ್ ಆರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಪ್ರವೀಣ್ ಮಾವಿನಕಟ್ಟೆ, ಅಮರ ಸಂಘಟನಾ ಸಮಿತಿಯ ಅಧ್ಯಕ್ಷರಾದ ಸಾತ್ವಿಕ್ ಮಡಪ್ಪಾಡಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಪಂಚಾಯತ್ ಸದಸ್ಯರಾದ ಜಿಲ್ಲಾಧ್ಯಕ್ಷ ಹರೀಶ್ ರೈ ಉಬರಡ್ಕ , ಪಂಚಾಯತ್ ಸದಸ್ಯರುಗಳಾದ ಪ್ರಶಾಂತ್ ಮೆದು ಹಾಗೂ ದುರ್ಗಾದಾಸ್ ಮೆತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರವೀಣ್ ವಂದಿಸಿದರು. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ಭೇಟಿ ನೀಡಿ ಮಾರ್ಗದರ್ಶನ ನೀಡಿದರು
ಪುತ್ತೂರು ರೋಟರಿ ಕ್ಲಬ್ಬಿನ ಮಾಜಿ ಅಧ್ಯಕ್ಷ ಕ್ಸೇವಿಯರ್ ಡಿಸೋಜಾ, ಸುಳ್ಯ ಲಯನ್ಸ್ ಕ್ಲಬ್ನ ಪ್ರಥಮ ಉಪಾಧ್ಯಕ್ಷರಾದ ರಾಮಕೃಷ್ಣ ರೈ, ರಾಮಚಂದ್ರ ಪಲ್ಲತಡ್ಕ, ವೆಂಕಟ್ರ ಮಣ ಮೆದು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಂಚಾಯತ್ ಸಿಬ್ಬಂದಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.









