ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಚಾಲನೆ ನೀಡಿದರು. ದೇವಚಳ್ಳ ಗ್ರಾಮದ ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಸರಕಾರಿ ಪ್ರೌಢಶಾಲೆಗೆ ಮಂಜೂರುಗೊಂಡ ತಲಾ ಎರಡು ತರಗತಿ ಕೊಠಡಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಕೇಂದ್ರ ಸರಕಾರದ ಪಶ್ಚಿಮ ವಾಹಿನಿ
ಯೋಜನೆಯಡಿಯಲ್ಲಿ ರೂ.6.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟು, ಸೇತುವೆಯನ್ನು ಸಚಿವರು ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಪ್ರಾ. ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗ್ರಾ.ಪಂ.ಉಪಾಧ್ಯಕ್ಷೆ ಪ್ರಮೀಳಾ , ಸದಸ್ಯರಾದ ಜಗದೀಶ್, ಹರೀಶ್, ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಮಾವಿನಕಟ್ಟೆ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಹೇಮಂತ್ ಕುಮಾರ್ ಬಿ.ಎಸ್., ಗುತ್ತಿಗೆದಾರರಾದ ಪ್ರಭಾಕರ ಶೆಟ್ಟಿ ಕುಂದಾಪುರ ಹಾಗೂ ಊರವರು ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ರೂ.8.39 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಸುಳ್ಯ ತಾಲೂಕಿನ ಬೋಗಾಯನಕೆರೆ- ಎಣ್ಣೆಮಜಲು-ಕೊನ್ನಡ್ಕ-ಬೀದಿಗುಡ್ಡೆ-ಅಡ್ಡಬೈಲು ರಸ್ತೆಯನ್ನು ಸಚಿವ ಎಸ್. ಅಂಗಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ದ.ಕ. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಪ್ರಮುಖರಾದ ರಮಾನಂದ ಎಣ್ಣೆಮಜಲು, ಕುಳ ಸುಬ್ರಹ್ಮಣ್ಯ ಪಂಜ, ಇನ್ನಿತರರು ಉಪಸ್ಥಿತರಿದ್ದರು.
ರೂ.51 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಂಡ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಗ್ರಾಮದ ಕಾವಿನಮೂಲೆ – ಪಾಟಾಜೆ ರಸ್ತೆಯ ಉದ್ಘಾಟನೆಯನ್ನು ಸಚಿವರು ನೆರವೇರಿಸಿದರು
ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ, ಉಪಾಧ್ಯಕ್ಷೆ ಗೌರಿ ನೆಟ್ಟಾರು, ಸದಸ್ಯರಾದ ಅನಿಲ್ ರೈ, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಆರ್.ಕೆ.ಭಟ್ ಕುರುಬುಂಡೇಲು, ಚಿದಾನಂದ ರಾವ್, ವೆಂಕಟರಮಣ ಭಟ್ ಸೇರಿದಂತೆ ಊರಿನವರು ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ಬೋಗಾಯನಕೆರೆ-ಎಣ್ಣೆಮಜಲು-ಕೊನ್ನಡ್ಕ-ಬೀದಿಗುಡ್ಡೆ-ಅಡ್ಡಬೈಲು ಸಂಪರ್ಕ ರಸ್ತೆಯ ಫಲಾನುಭವಿಗಳ ಅಪೇಕ್ಷೆಯ ಮೇರೆಗೆ ಸಚಿವರಾದ ಎಸ್. ಅಂಗಾರರವರ ವಿಶೇಷ ಮುತುವರ್ಜಿಯಲ್ಲಿ ಈ ಮಾರ್ಗದಲ್ಲಿ ಪ್ರಾರಂಭಗೊಂಡ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರಕ್ಕೆ ಸಚಿವರು ಇಂದು ಅಡ್ಡಬೈಲಿನಲ್ಲಿ ಚಾಲನೆ ನೀಡಿದರು.