ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಚಾಲನೆ ನೀಡಿದರು. ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಶ್ರೀ ರಾಜ್ಯ ದೈವ, ಪುರುಷ ದೈವಸ್ಥಾನ ರಸ್ತೆಯ ರೂ.30 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಂಡ ಕಾಂಕ್ರೀಟ್ ರಸ್ತೆಯನ್ನು
ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ಚಂದ್ರಶೇಖರ ತಳೂರು ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಶೆಟ್ಟಿಮಜಲು ಎಂಬಲ್ಲಿ ರೂ.1.40 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಸೇತುವೆ ಹಾಗೂ ಕಿಂಡಿಅಣೆಕಟ್ಟು ಕಾಮಗಾರಿಯನ್ನು ಸಚಿವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಅಳುವೆಪಾರೆ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಊರಿನ ಪ್ರಮುಖರು, ಫಲಾನುಭವಿಗಳು ಉಪಸ್ಥಿತರಿದ್ದರು.
ಲೋಕೋಪಯೋಗಿ ಇಲಾಖೆ, 5054 ರಾಜ್ಯ ಹೆದ್ದಾರಿ ಸೇತುವೆ ಸುಧಾರಣೆ ಯೋಜನೆಯಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ 37ರ ಕೋಟೆಹೊಳೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆ ಕಾಮಗಾರಿಗೆ ಸಚಿವ ಎಸ್. ಅಂಗಾರ ಇಂದು ಗುದ್ದಲಿ ಪೂಜೆ ನೆರವೇರಿಸಿದರು.