ಸುಳ್ಯ:ಪಂಜದ ಪ್ರಮುಖರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸುಳ್ಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಪಕ್ಚದ ಧ್ವಜ ನೀಡಿ
ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿದರು.ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನಿವೃತ್ತರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ.
ಕೆಪಿಸಿಸಿ ಸದಸ್ಯ ಭರತ್ ಮುಂಡೋಡಿ, ಪ್ರಮುಖರಾದ ಎನ್.ಜಯಪ್ರಕಾಶ್ ರೈ, ಸದಾನಂದ ಮಾವಜಿ, ಎಂ.ವೆಂಕಪ್ಪ ಗೌಡ, ಗೀತಾ ಕೋಲ್ಚಾರ್, ರಾಜೀವಿ ರೈ, ಅಬ್ದುಲ್ ಗಫೂರ್ ಕಲ್ಮಡ್ಕ, ಇಸ್ಮಾಯಿಲ್ ಪಡ್ಪಿನಂಗಡಿ, ಮಹಮ್ಮದ್ ಕುಂಞಿ ಗೂನಡ್ಕ, ಶಾಫಿ ಕುತ್ತಮೊಟ್ಟೆ,ಸಿದ್ದಿಕ್ ಕೊಕ್ಕೊ ಮತ್ತಿತರರು ಉಪಸ್ಥಿತರಿದ್ದರು.