ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪ ನಿರಾಕರಿಸಿ ದೇವಸ್ಥಾನದ ನಡೆಯಲ್ಲಿ ಇಂದು ಸತ್ಯ ಪ್ರಮಾಣ ಮಾಡಿದ್ದಾರೆ. ಇಂದು ಬೆಳಿಗ್ಗೆ ನಾಗತೀರ್ಥ ನದಿಯಲ್ಲಿ ಸ್ನಾನ ಮಾಡಿ ದೇಗುಲಕ್ಕೆ ಬಂದ ಅವರು ಬೆಳಗ್ಗಿನ ಪೂಜೆಯ ಬಳಿಕ ‘ತಾನು ದೇಗುಲದಲ್ಲಿ ಯಾವುದೇ ಅವ್ಯವಹಾರ ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಮಾಣ ಮಾಡಿರುವುದಾಗಿ ತಿಳಿದುಬಂದಿದೆ.












