ಸುಳ್ಯ:ಸುಳ್ಯದ ಸ್ನೇಹ ಶಾಲೆಯ ಮುಖ್ಯೋಪಾಧ್ಯಾಯರಾಗಿ ದೇವಿಪ್ರಸಾದ್ ಜಿ. ಸಿ. ನೇಮಕಗೊಂಡಿದ್ದಾರೆ.ಹತ್ತು ವರ್ಷಗಳಿಂದ ಸ್ನೇಹ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ಕಳೆದ ಮೂವತ್ತು ವರ್ಷಗಳಲ್ಲಿ ಶಾಲೆಯನ್ನು ಮುನ್ನಡೆಸಿದ ಜಯಲಕ್ಷ್ಮಿ ದಾಮ್ಲೆಯವರು ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಕಾರ್ಯದರ್ಶಿ ಡಾ. ವಿದ್ಯಾಶಾಂಭವ ಪಾರೆ, ನಿರ್ದೇಶಕರಾದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ ಭಾರದ್ವಾಜ್, ಪೋಷಕರ ಸಂಘದ ಅಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post














