ಸುಳ್ಯ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ, ಪುತ್ತೂರು ಬೆದ್ರಾಳ ನಿವಾಸಿ ಧನಂಜಯ ವಾಗ್ಲೆ (75ವ) ಅವರು ಸ್ವಗೃಹದಲ್ಲಿ ನಿಧನರಾದರು.ಮೂಲತಃ ಸುಳ್ಯದ ಕೋಡಿಯಾಲ ಬೈಲಿನ ಸ್ವಯಂಸೇವಕರಾಗಿದ್ದರು. ಸುಳ್ಯ ತಾಲೂಕಿನಲ್ಲಿ ಜನಸಂಘ ಹಾಗು ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಸುಮಾರು 20 ವರ್ಷಗಳ ಕಾಲ ಬಿಜೆಪಿಯ
ಪೂರ್ಣಾವಧಿಕಾರ್ಯಕರ್ತರಂತೆ ಕಾರ್ಯ ನಿರ್ವಹಿಸಿದ್ದರು.
ತುರ್ತು ಪರಿಸ್ಥಿತಿ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ವಾಗ್ಲೆಯವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಬಿಜೆಪಿ ಹಾಗು ಹಿಂದೂ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಾಜಿ ಎಂಎಲ್ಸಿ ಅಣ್ಣಾ ವಿನಯ ಚಂದ್ರ, ಆರ್ಎಸ್ಎಸ್ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ನ.ಸೀತಾರಾಮ್, ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ. ಟಿ, ಸುಳ್ಯ ಸಿಎ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುದರ್ಶನ ಸೂರ್ತಿಲ, ಜಿಲ್ಲಾ ಬೌದಿಕ್ ಪ್ರಮುಖ್ ಸುಬ್ರಾಯ,ರಾಜೇಶ್ ಪುತ್ತೂರು ಮತ್ತಿತರರು ಅಂತಿಮ ನಮನ ಸಲ್ಲಿಸಿದರು.














