ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಸ್ವಾಗತಿಸಿ, ಶಾಲು ಹೊದಿಸಿ ಸನ್ಮಾನಿಸಿದರು. ಪಂಜ ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷರಾದ ಚಂದ್ರಶೇಖರ ಕರಿಮಜಲು ಹಾಗೂ ಸಂದೀಪ್ ರೈ ಪಲ್ಲೋಡಿ ಉಪಸ್ಥಿತರಿದ್ದರು.












