ಧರ್ಮಸ್ಥಳ: ಧರ್ಮಸ್ಥಳದಲ್ಲಿ ಬೃಹತ್ ಧರ್ಮಸಂರಕ್ಷಣಾ ಸಮಾವೇಶ ಭಾನುವಾರ ನಡೆಯಿತು. ಅವಿಭಜಿತ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯಿಂದ ಬೆಳ್ತಂಗಡಿ ತಾಲ್ಲೂಕು ಜೈನಸಮಾಜ ಬಾಂಧವರ ಆಶ್ರಯದಲ್ಲಿ ಬೆಳ್ತಂಗಡಿ ಜೈನಪೇಟೆಯಲ್ಲಿರುವ ಬಸದಿಯಿಂದ ಧರ್ಮಸ್ಥಳಕ್ಕೆ ಬೃಹತ್ ವಾಹನ ಜಾಥಾದಲ್ಲಿ ಆಗಮಿಸಿ
ಅಮೃತವರ್ಷಿಣಿ ಸಭಾಭವನದಲ್ಲಿ ಸಮಾವೇಶ ನಡೆಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ
ಸತ್ಯದ ಸತ್ವ ಪರೀಕ್ಷೆಯ ಕಾಲ ಇದಾಗಿದ್ದು, ಸತ್ಯದ ಸಾಕ್ಷಾತ್ಕಾರವಾಗುತ್ತಿರುವುದು ಸಂತಸದಾಯಕವಾಗಿದೆ ಎಂದು ಹೇಳಿದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ. ನೀತಾ ರಾಜೇಂದ್ರ ಕುಮಾರ್, ಅಮಿತ್, ಶ್ರದ್ಧಾ ಅಮಿತ್ ಮತ್ತು ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.ಸುಮಾರು ಆರುನೂರಕ್ಕೂ ಮಿಕ್ಕಿ ವಾಹನಗಳಲ್ಲಿ ಮೂರು ಸಾವಿರಕ್ಕೂ ಮಿಕ್ಕಿದ ಅಭಿಮಾನಿಗಳು ಮೆರವಣಿಗೆಯಲ್ಲಿ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಿದರು.
ಬಳಿಕ ಪಂಚನಮಸ್ಕಾರ ಮಂತ್ರದ ಸಾಮೂಹಿಕ ಪಠಣ ಮಾಡಲಾಯಿತು. ಭಗವಾನ್ ಚಂದ್ರನಾಥ ಸ್ವಾಮಿ ಬಸದಿಗೆ ಹೋಗಿ ದೇವರ ದರ್ಶನ ಮಾಡಿ, ಅಲ್ಲಿಯೂ ಪಂಚನಮಸ್ಕಾರ ಮಂತ್ರದ ಸಾಮೂಹಿಕ ಪಠಣ ಮಾಡಿದರು.












