ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ, ಧರ್ಮದೇವತೆಗಳ ಅಭಯ ಮತ್ತು ಅಣ್ಣಪ್ಪ ಸ್ವಾಮಿ ರಕ್ಷಣೆಯಿಂದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತಿವೆ.ಸತ್ಯದ ಸಾಕ್ಷಾತ್ಕಾರವಾಗುತ್ತಿದೆ. ಜೊತೆಗೆ ಶಾಂತಿ, ನೆಮ್ಮದಿಯೂ ದೊರಕಿದೆ.ಅಲ್ಲದೆ ಧರ್ಮಸ್ಥಳದ ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವದಿಂದ ನಮಗೆ ಎಲ್ಲಾ ಸೇವಾಕಾರ್ಯಗಳನ್ನು ಮುಂದುವರಿಸಲು
ನವಚೈತನ್ಯ ಮತ್ತು ಉತ್ಸಾಹ ಮೂಡಿಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಧರ್ಮಸ್ಥಳ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮಜಾಗೃತಿ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಬಾರ್ಕೂರಿನ ಹಿರಿಯ ವಿದ್ವಾಂಸ ದಾಮೋದರ ಶರ್ಮಾ,ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟ,ವಿದ್ವಾನ್ ನಾಗೇಂದ್ರ ಭಾರದ್ವಾಜ,
ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್,
ಕಟೀಲು ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣ ಮಾತನಾಡಿದರು.
ಹೇಮಾವತಿ ವಿ. ಹೆಗ್ಗಡೆ, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಸೋನಿಯಾವರ್ಮ ಉಪಸ್ಥಿತರಿದ್ದರು.
ಉಡುಪಿ, ದಕ್ಷಿಣಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಎಲ್ಲಾ ಧಾರ್ಮಿ ಕ್ಷೇತ್ರಗಳು, ದೈವಸ್ಥಾನಗಳು ಮತ್ತು ಶ್ರದ್ಧಾಕೇಂದ್ರಗಳ ಮುಖಂಡರು ಹಾಗೂ ಧಾರ್ಮಿಕ ಪರಿಷತ್ತಿನ ಸದಸ್ಯರು ಸೇರಿದಂತೆ ಸುಮಾರು ಆರು ಸಾವಿರ ಮಂದಿ ಸಭಾಸದರು ಉಪಸ್ಥಿತರಿದ್ದರು. ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ, ಮೊದಲಾದವರು ಇದ್ದರು.
ಪ್ರೊ. ಸುವೀರ್ ಕುಮಾರ್ ಸಭೆಯಲ್ಲಿ ತೆಗೆದುಕೊಂಡ ಠರಾವನ್ನು ಮಂಡಿಸಿದರು.
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕ ಡಾ. ಶ್ರೀಧರ ಭಟ್ ಕೊನೆಯಲ್ಲಿ ಧನ್ಯವಾದವಿತ್ತರು.












