ಧರ್ಮಾಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ನೆರವೇರಿಸಿದರು.ಈ ವೇಳೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ವಿಕ್ರಮ್ ಅಮಟೆ,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷಹರಿಕೃಷ್ಣ ಬಂಟ್ವಾಳ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷ ಜಯ ಮೋನ್ನಪ್ಪ ಗೌಡ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.