ಧರ್ಮಸ್ಥಳ:ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಶಿವರಾತ್ರಿ ಪ್ರಯುಕ್ತ ಅಹೋರಾತ್ರಿ ಶಿವಪಂಚಾಕ್ಷರಿ ಪಠಣ ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇವಸ್ಥಾನದ ಎದುರು ಪ್ರವಚನಮಂಟಪದಲ್ಲಿ ದೀಪ ಬೆಳಗಿಸಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿದರು. ಬಳಿಕ ಅವರು ಶಿವರಾತ್ರಿ ಜಾಗರಣೆ ಬಗ್ಗೆ ಮಾಹಿತಿ ನೀಡಿದರು.ದೇವಸ್ಥಾನದ
ಪರಿಸರವಿಡೀ ಶಿವಪಂಚಾಕ್ಷರಿ ಪಠಣ ಅನುರಣಗೊಂಡಿತು.
ಆಕರ್ಷಕ ವಿನ್ಯಾಸದಲ್ಲಿ ವಿದ್ಯುದ್ದೀಪಗಳಿಂದ ಅಲಂಕೃತಗೊಂಡ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಕಂಗೊಳಿಸಿತ್ತು. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಎಂದು ಹಾರೈಸಿದರು.
ಬಳಿಕ ಎಲ್ಲರೂ ಸಾಮೂಹಿಕವಾಗಿ “ಓಂ ನಮಃ ಶಿವಾಯ” ಪಠಣ ಮಾಡಿದರು.
ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿ ಧನ್ಯತೆಯನ್ನು ಹೊಂದಿರುವಿರಿ. ನಿಮ್ಮ ಎಲ್ಲಾ ಕಷ್ಟಗಳನ್ನು ಶಿವನಿಗೆ ಅರ್ಪಿಸಿ, ಸುವಿಚಾರಗಳನ್ನು ಮಾತ್ರ ಕೊಂಡು ಹೋಗಿ. ವಿಷಕಂಠನಾದ ಶಿವನಿಗೆ ಮಾತ್ರ ಹಾಲಾಹಲ ಸ್ವೀಕರಿಸುವ ಸಾಮರ್ಥ್ಯವಿದೆ.ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಸುಪ್ರಿಯಾಹರ್ಷೇಂದ್ರಕುಮಾರ್ ಉಪಸ್ಥಿತರಿದ್ದು ಶಿವಪಂಚಾಕ್ಷರಿ ಪಠಣದಲ್ಲಿ ಭಾಗವಹಿಸಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ, ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಮರಿಯಪ್ಪ ಕೂಡಾ ಉಪಸ್ಥಿತರಿದ್ದರು.
ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು. ಅಹೋರಾತ್ರಿ ಶಿವಪಂಚಾಕ್ಷರಿ ಪಠಣ ನಡೆಯಿತು. ಭಕ್ತರು ದೇವರದರ್ಶನ ಮಾಡಿ ವಿಶೇಷವಾಗಿ ಎಳನೀರಿನ ಅಭಿಷೇಕ ಮತ್ತು ಶತರುದ್ರಾಭಿಷೇಕ ಸೇವೆ ಸಲ್ಲಿಸಿ ಧನ್ಯತೆಯನ್ನು ಹೊಂದಿದರು.
ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿರಿದ್ದರು.




