ಧರ್ಮಸ್ಥಳ: ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶನಿವಾರ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಬಂದ ಪಾದಯಾತ್ರಿಗಳನ್ನು ಪ್ರವಚನ ಮಂಟಪದಲ್ಲಿ ಅಭಿನಂದಿಸಿ ಮಾತನಾಡಿದರು.

ಪಾದಯಾತ್ರಿಗಳ ವತಿಯಿಂದ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಗೌರವಿಸಿದರು.ಧರ್ಮಸ್ಥಳದ ವತಿಯಿಂದ ಪಾದಯಾತ್ರೆಯ ರೂವಾರಿ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಮರಿಯಪ್ಪ ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಅಭಿನಂದಿಸಿದರು.
ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಮತ್ತು ಮರಿಯಪ್ಪ ಉಪಸ್ಥಿತರಿದ್ದರು.




