ಧರ್ಮಸ್ಥಳ: ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ ಯೋಗ. ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ
ಮಾತನಾಡಿದರು.ರಾಜೀವ್ಗಾಂಧಿ ಆರೋಗ್ಯ ವಿ.ವಿ. ಉಪಕುಲಪತಿ ಡಾ. ಭಗವಾನ್ ಬಿ.ಸಿ. ಆನ್ಲೈನ್ ಮೂಲಕ ಸಂದೇಶ ನೀಡಿದರು.ರಾಜೀವ್ಗಾಂಧಿ ಆರೋಗ್ಯ ವಿ.ವಿ. ಯ ಪಠ್ಯಕ್ರಮ ಅಭಿವೃದ್ಧಿ ಕೇಂದ್ರದ ಪ್ರಭಾರ ನಿರ್ದೇಶಕ ಡಾ. ಷಣ್ಮುಖಪ್ಪ ಮಾತನಾಡಿದರು
ಬೆಂಗಳೂರಿನ ಚಿನ್ಮಯಿ ಅವರಿಗೆ “ಯೋಗರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.ಶಾಂತಿವನ ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ ಶೆಟ್ಟಿ ವರದಿ ಸಾದರಪಡಿಸಿದರು.ಎಸ್.ಡಿ.ಎಂ ಯೋಗವಿಜ್ಞಾನಗಳ ಮತ್ತು ಪ್ರಕೃತಿಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಉಪಪ್ರಾಂಶುಪಾಲರಾದ ಡಾ. ಸುಜಾತ, ಕೆ.ಜೆ. ಧನ್ಯವಾದವಿತ್ತರು.ಡಾ. ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.







