ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನವೆಂಬರ್ 16 ರಿಂದ 18ರ ವರೆಗೆ ಹಮ್ಮಿಕೊಂಡಿದ್ದ ದ.ಕ.ಜಿಲ್ಲೆಯ ಪ್ರವಾಸ ರದ್ದುಗೊಂಡಿದೆ. ನವೆಂಬರ್ 16ರ ಗುರುವಾರ ರಾತ್ರಿ ಸುಳ್ಯಕ್ಕೆ ಆಗಮಿಸಿ ನ.17 ರಂದು ಸುಳ್ಯ ನಗರದ ಕುಡಿಯುವ ನೀರಿನ ಯೋಜನೆಗೆ ಚಾಲನೆ, ರಾಷ್ಟ್ರೀಯ ಎ ಗ್ರೇಡ್ ಕಬಡ್ಡಿ ಪಂದ್ಯಾಟ, ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಕಾಂಗ್ರೆಸ್ ಕಾರ್ಯಕರ್ತರ ಸಭೆ ಹೀಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರಿದ್ದರು. ಇದೀಗ ಸಚಿವರ ಪ್ರವಾಸ ಕಾರ್ಯಕ್ರಮ ರದ್ದುಪಡಿಸಲಾಗಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









