ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸ್ಮರಣೆಗಾಗಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ
ಪ್ರಧಾನಿ ಮೋದಿ, ಡಿಜಿಟಲ್ ಹಣಕಾಸು ಸಾಕ್ಷರತೆಯನ್ನು ಪಸರಿಸುವುದೊಂದಿಗೆ ಬಡವರ ಮನೆ ಬಾಗಿಲಿಗೂ ಬ್ಯಾಂಕಿಂಗ್ ಸೇವೆ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ದೇಶದೆಲ್ಲೆಡೆ 75 ಜಿಲ್ಲೆಗಳಲ್ಲಿ 75 ಡಿಬಿಯು ಘಟಕಗಳನ್ನು ತೆರೆಯಲಾಗುತ್ತಿದೆ. ಈ ಮೂಲಕ ಹಣಕಾಸು ಸೇವೆ ಹೆಚ್ಚಿಸುವ ಮೂಲಕ ಡಿಜಿಟಲ್ ಬ್ಯಾಂಕಿಂಗ್ ಪ್ರಯೋಜನಗಳನ್ನು ದೇಶದೆಲ್ಲೆಡೆ ತಲುಪಿಸುವ ಗುರಿ ಹೊಂದಲಾಗಿದೆ.ವರ್ಚುವಲ್ ಆಗಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಭಾಗವಹಿಸಿದ್ದರು.