ಮಂಗಳೂರು:ತೆಂಕುತಿಟ್ಟಿನ ಖ್ಯಾತ ಭಾಗವತರಾದ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು.ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಸೇವೆ ನಲ್ಲಿಸಿದ್ದರು.ತೆಂಕುತಿಟ್ಟಿನ ಪ್ರಸಿದ್ದ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ಭಾಗವತರಾಗಿದ್ದ ಅವರು
ತಮ್ಮ ವಿಶಿಷ್ಟ ರಾಗ ಶೈಲಿಯಿಂದಾಗಿ ಭಾರಿ ಅಭಿಮಾನಿಗಳನ್ನು ಗಳಿಸಿದ್ದರು. ಕರುಣಾ ರಸದ ಪದ್ಯಗಳನ್ನು ರಾಗಬದ್ಧವಾಗಿ ಹಾಡುವುದಕ್ಕೆ ಹೆಸರುವಾಸಿಯಾಗಿದ್ದರು. ಅಭಿಮಾನಿಗಳು ಅವರಿಗೆ ‘ರಸರಾಗ ಚಕ್ರವರ್ತಿ’ ಎಂದು ಬಿರುದು ನೀಡಿದ್ದರು.
ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ಕೆಲ ವರ್ಷಗಳಿಂದ ವಿಶ್ರಾಂತ ಜೀವನ ನಡೆಸುತ್ತಿದ್ದರು. ಅತಿಥಿ ಭಾಗವತರಾಗಿ ಯಕ್ಷಗಾನ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲಿದ್ದರು.















