ಸುಳ್ಯ:ನಾಳೆ (ಅ.11) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ವಿಧಾನ ಪರಿಷತ್ ಚುನಾವಣೆಯ ಪೂರ್ವ ತಯಾರಿ ಸಭೆಯು ಅ.11ರಂದು ಪೂ.10ಕ್ಕೆ ಸುಳ್ಯದ ಸುಳ್ಯದ ಸದರ್ನ್ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾ
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅದ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ. ಎ. ಬಾವ ಮತ್ತು ಕೆಪಿಪಿಸಿ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.