ಮಂಗಳೂರು: ಮಾದಕ ದ್ರವ್ಯ ಬಳಕೆ ತಡೆಯಲು ಪೊಲೀಸ್ ಇಲಾಖೆಯು ಜಿಲ್ಲಾಡಳಿತ ಮತ್ತು ಶಿಕ್ಷಣ ಸಂಸ್ಥೆಗಳೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಣ್ಯ ಕ್ರಮಕೈಗೊಳ್ಳಲು ಸೂಚಿಸಿರುವುದಾಗಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು, ಅಧೀಕ್ಷಕರ ಜೊತೆ ಶುಕ್ರವಾರ ಸಭೆ ನಡೆಸಿದ ಬಳಿಕ ಈ ಬಗ್ಗೆ ಮಾಹಿತಿ
ನೀಡಿದರು.ಜಿಲ್ಲೆಯಲ್ಲಿ ಗೂಂಡಾಗಿರಿ ಹಾವಳಿಯನ್ನು ನಿಗ್ರಹಿಸಲು ಕಠಿಣ ಕ್ರಮಕ್ಕೆ ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಅನೈತಿಕ ಪೊಲೀಸ್ ಗಿರಿಯನ್ನು ಹತ್ತಿಕ್ಕಲು ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚಿಸಿದ್ದು ಯಾವುದೇ ಶಕ್ತಿ ಕಾನೂನು ಕೈಗೆತ್ತಿಕೊಂಡಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.
ಜಿಲ್ಲೆಯು ಮತ್ತಷ್ಟು ಅಭಿವೃದ್ಧಿ ಹೊಂದಲು ವಿಫುಲ ಅವಕಾಶಗಳನ್ನು ಜಿಲ್ಲೆಯ ಕಾನೂನೂ ಸುವ್ಯವಸ್ಥೆಯು ಇದಕ್ಕೊಂದು ಸವಾಲಾಗಿದ್ದು, ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ಸಾಮರಸ್ಯ ಕಾಪಾಡಲು ನಿಷ್ಪಕ್ಷಪಾತವಾಗಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಜಿಲ್ಲೆಯ ಎಲ್ಲಾ ಪೊಲೀಸ್ ಸಿಬ್ಬಂದಿ ಸಾಂವಿಧಾನಿಕವಾಗಿ ಕಾರ್ಯ ನಿರ್ವಹಿಸಲು ಸೂಚಿಸಿರುವುದಾಗಿ ಸಚಿವರು ತಿಳಿಸಿದ್ದಾರೆ