ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಾದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 14 ರಿಂದ ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆಗಸ್ಟ್ 14 ರಂದು ರಾತ್ರಿ 7.45ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ – ಸಕ್ರ್ಯೂಟ್ ಹೌಸ್ ನಲ್ಲಿ ವಾಸ್ತವ್ಯ. ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ನೆಹರು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ, 10.30ಕ್ಕೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ
ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆ, ಮಧ್ಯಾಹ್ನ 12 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಬಾಲಕಿಯರ ಕ್ರೀಡಾ ವಸತಿ ನಿಲಯ ಉದ್ಘಾಟನೆ. 12.45ಕ್ಕೆ ನಗರದ ಅಂಬೇಡ್ಕರ್ ವೃತ್ತ ನಿರ್ಮಾಣದ ಗುದ್ದಲಿ ಪೂಜೆ, ಮಧ್ಯಾಹ್ನ 3 ಗಂಟೆಗೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡ ಉದ್ಘಾಟನಾ ಸಮಾರಂಭ, ಸಂಜೆ 4.15 ಕ್ಕೆ ನಗರದ ಟಿ.ಎಂ.ಎ. ಪೈ ಹಾಲ್ನಲ್ಲಿ ಸೈಬರ್ ಸೇಫ್ ಮಂಗಳೂರು ವಾಕಥಾನ್, 5 ಗಂಟೆಗೆ ಮಂಗಳೂರು ಫಾದರ್ ಮುಲ್ಲರ್ ಕನ್ವೆನ್ಸನ್ ಸೆಂಟರ್-ಇಂದಿರಾ ಆಸ್ಪತ್ರೆಯ 25ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಂತರ ರಾತ್ರಿ 11.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.