ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ:22-06-2024 ರಿಂದ 26-06-2024 ರವರೆಗೆ ದ.ಕ. ಜಿಲ್ಲೆಯಲ್ಲಿ ಆರೇಂಜ್ ಅಥವಾ ರೇಡ್ ಅಲರ್ಟ್ ಮೂನ್ಸೂಚನೆ ಇರುತ್ತದೆ. ಅದರಿಂದ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾದ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ Incident Commander ಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗು ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ತಿಳಿಸಿದೆ
ಪ್ರವಾಸಿಗರು / ಸಾರ್ವಜನಿಕರು ನದಿ ತೀರಕ್ಕೆ. ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.