ಸುಳ್ಯ: ಲಯನ್ಸ್ ಕ್ಲಬ್ ಸುಳ್ಯ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆಶ್ರಯದಲ್ಲಿ ದ.ಕ.ಜಿಲ್ಲೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಂಗಳೂರು ವತಿಯಿಂದ ವಿಪತ್ತು ನಿರ್ವಹಣೆ ಬಗ್ಗೆ ಒಂದು ದಿನದ ಕಾರ್ಯಗಾರ ಶುಕ್ರವಾರ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.
ಎನ್.ಡಿ.ಆರ್.ಎಫ್.ನ ಮಂಗಳೂರು
ಟೀಮ್ ಕಮಾಂಡ್ ಅಜಯ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷೆ ಡಾ. ಅನುರಾಧಾ ಕುರುಂಜಿ ಮಾತನಾಡಿದರು. ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಲಯನ್ಸ್ ಕ್ಲಬ್ ಕೋಶಾಧಿಕಾರಿ ಕಿರಣ್ ನೀರ್ಪಾಡಿ, ರಾಮಚಂದ್ರ ಪಲ್ಲತ್ತಡ್ಕ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ದೊಡ್ಡಣ್ಣ ಬರೆಮೆಲು ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿಪತ್ತು ನಿರ್ವಹಣಾ ಬಗ್ಗೆ ಕಾರ್ಯಗಾರ ನಡೆಯಿತು. ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.