ಮಂಗಳೂರು:ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪರಿಶೀಲನೆ ನಡೆಸುವ ಸಂಬಂಧ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ)ಯು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಭಾಗವಹಿಸಿದ
ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ನಗರದ ಶಾಸ್ತ್ರಿ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಸಂಪೂರ್ಣ ಎಕ್ಕುಟ್ಟಿ ಹೋಗಿರುವ ಬಗ್ಗೆ ಪ್ರಸ್ತಾಪಿಸಿದರು.ಕುಡಿಯುವ ನೀರಿನ ಪೈಪ್ ಅಳವಡಿಕೆಗೆ ರಸ್ತೆ ಕಡಿಯಲಾಗಿದ್ದು ಕಾಂಕ್ರೀಟೀಕರಣ ಮಾಡಿ ರಸ್ತೆಯನ್ನು ಸರಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.ಪ್ರತಿ ತಿಂಗಳ ಪಡಿತರ ರೇಷನ್ ಪಡೆಯಲು ಆಗುತ್ತಿರುವ ಸಮಸ್ಯೆಗಳ ಬಗ್ಗೆ, ಸುಳ್ಯ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಉಂಟಾಗಿರುವ ಆನೆ ಹಾವಳಿಯ ಸಮಸ್ಯೆಯ ಬಗ್ಗೆ ದಿಶಾ ಸಭೆಯಲ್ಲಿ ಶಾಸಕರು ಸಂಸದರ ಹಾಗು ಅಧಿಕಾರಿಗಳ ಗಮನಕ್ಕೆ ತಂದರು.
ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ, ಎಸ್ಪಿ ಡಾ.ಅರಯಣ್ ಮತ್ತಿತರರು ಉಪಸ್ಥಿತರಿದ್ದರು.










