ಸುಳ್ಯ: 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಲಾಗಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ತಲಾ 7 ಶಿಕ್ಷಕರು ಸೇರಿ ಜಿಲ್ಲೆಯಲ್ಲಿ ಒಟ್ಟು 21 ಶಿಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಲಾಗಿದೆ. ಸುಳ್ಯ ತಾಲೂಕಿನ 3 ಮಂದಿ

ಉದಯಕುಮಾರ್ ರೈ,ಹನುಮಂತಪ್ಪ ಜಿ,ರಾಧಮ್ಮ ಕೆ.
ಶಿಕ್ಷಕರಿಗೆ ಪ್ರಶಸ್ತಿ ಘೋಷಣೆಯಾಗಿದೆ. ಪ್ರೌಢ ಶಾಲಾ ವಿಭಾಗದಲ್ಲಿ ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯ ಸಹ ಶಿಕ್ಷಕ ಉದಯಕುಮಾರ್ ರೈ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹನುಮಂತಪ್ಪ ಜಿ ಹಾಗೂ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ರಾಧಮ್ಮ ಕೆ. ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೆ.5ರಂದು ಸುಳ್ಯ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯುವ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.