ಸುಳ್ಯ: ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಜೂ.23ರ ಶುಕ್ರವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ನಡೆಯಿತು. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸಿ.ಬಿ, ಡಿಸಿಪಿ ಅನ್ಶುಕುಮಾರ್ ವೇದಿಕೆಯಲ್ಲಿದ್ದರು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಅಶೋಕ್ ಕುಮಾರ್ ರೈ, ಭಾಗಿರಥಿ ಮುರುಳ್ಯ ಹಾಗೂ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.