ಸುಳ್ಯ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನ.17ರಂದು ಸುಳ್ಯ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವರು ದಿನಪೂರ್ತಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು16ರಂದು ರಾತ್ರಿ ಸುಳ್ಯಕ್ಕೆ ಆಗಮಿಸಿ ವಾಸ್ತವ್ಯ ಮಾಡುವ ಸಚಿವರು
17ರಂದು ಬೆಳಿಗ್ಗೆ 10.30ಕ್ಕೆ ನಗರ ಪಂಚಾಯತ್ನ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವರು.11.30ಕ್ಕೆ ಪಯಸ್ವಿನಿ ನದಿಯಲ್ಲಿ ನಿರ್ಮಾಣ ಆದ ವೆಂಟೆಡ್ ಡ್ಯಾಂ ವೀಕ್ಷಣೆ ಮಾಡುವರು. 12.30ಕ್ಕೆ ಬಾಳಿಲ ಹಾಸ್ಟೆಲ್ಗೆ ಭೇಟಿ ನೀಡಿ ನೂತನ ಕಟ್ಟಡ ಉದ್ಘಾಟಿಸುವರು. 1.30ಕ್ಕೆ ಸುಳ್ಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಂದು ಕೊರತೆಗಳ ಪರಿಶೀಲನೆ ನಡೆಸುವರು. 3 ಗಂಟೆಗೆ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. 4 ಗಂಟೆಗೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು.6 ಗಂಟೆಗೆ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪಿ.ಸಿ.ಜಯರಾಮ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,
ಕೆಪಿಸಿಸಿ ಸದಸ್ಯರಾದ ಭರತ್ ಮುಂಡೋಡಿ, ಸರಸ್ವತಿ ಕಾಮತ್, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಚಂದ್ರಲಿಂಗಂ ಉಪಸ್ಥಿತರಿದ್ದರು.









