ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯರಾದ ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಮಾಡಿ ಶುಭ ಹಾರೈಸಿದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ
ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ, ಹಿರಿಯ ಪತ್ರಕರ್ತರಾದ ಆರ್.ಎನ್. ಪೂವಣಿ, ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.









