ಸುಳ್ಯ:ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೀಡಲಾಗುವ 2025ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ತಾಲೂಕಿನ ಮೂರು ಮಂದಿ ಶಿಕ್ಷಕರಿಗೆ ಲಭಿಸಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ
ಬೆಂಡೋಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಲಲಿತಾ ಕುಮಾರಿ ಎಸ್, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀಧರ ಗೌಡ ಕೆ, ಪ್ರೌಢ ಶಾಲಾ ವಿಭಾಗದಲ್ಲಿ ಎಣ್ಮೂರು ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಮೋಹನ ಎ. ಆಯ್ಕೆಯಾಗಿದ್ದಾರೆ. 2025ನೇ ಸಾಲಿನಲ್ಲಿ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲಾ ಮಟ್ಟದಲ್ಲಿ ಏಳು ತಾಲೂಕಿನ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಲಭಿಸಿದೆ. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.












