ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜು.22ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ: ಜು.22ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ
ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಬೆಳಿಗ್ಗ್ಎ 11.15ಕ್ಕೆ ನಗರದ ಜೆಪ್ಪುವಿನ ಪ್ರೆಸ್ಟೀಜ್ ಇಂಟರ್ ನ್ಯಾಶನಲ್ ಆಡಿಟೋರಿಯಂ ನಲ್ಲಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ ಮತ್ತು ಉಡುಪಿ ಅವರ ಆಶ್ರಯದಲ್ಲಿ ಶೈಕ್ಷಣಿಕ ಸಮ್ಮೇಳನ ಪ್ರಶಸ್ತಿ ಪ್ರಧಾನ- ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2:30ಕ್ಕೆ ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿ, ಸಂಜೆ 4:25ಕ್ಕೆ ಮಂಗಳೂರಿನಿಂದ ಇಂಡಿಗೋ ವಿಮಾನದ ಮೂಲಕ ಹೊರಟು ಸಂಜೆ 5.25ಕ್ಕೆ ಬೆಂಗಳೂರು ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.