ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 18 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 7 ಮಂಗಳೂರು ವಿಮಾನ ನಿಲ್ದಾಣ ಆಗಮಿಸಿ ಸುಳ್ಯ ಕ್ಕೆ ಪ್ರಯಾಣ, 9 ಗಂಟೆಗೆ- ಸುಳ್ಯ ತಾಲೂಕು ಪಂಚಾಯತ್ ರಾಜ್ಯ ಇಂಜಿನಿಯರಿಂಗ್ ಉಪ ವಿಭಾಗದ ನೂತನ ಕಚೇರಿ ಕಟ್ಟಡ ಉದ್ಘಾಟನೆ, 9.30- ಸುಳ್ಯ ತಾಲೂಕು ಆಸ್ಪತ್ರೆಯ
ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಉದ್ಘಾಟನೆ, 10ಕ್ಕೆ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ ಉದ್ಘಾಟನೆ, ಅರಂಬೂರು, 10.30- ಸುಳ್ಯ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟನೆ, ಮಧ್ಯಾಹ್ನ 12.30- ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ
3ಗಂಟೆಗೆ ಪುತ್ತೂರಿನಲ್ಲಿ ಸರಕು ಮತ್ತು ಸೇವಾ ತೆರಿಗೆಯ ಲೆಕ್ಕಪರಿಶೋಧನಾ ಕಚೇರಿ ಮತ್ತು ಜಾರಿ ವಿಭಾಗದ ಹೊಸ ಕಟ್ಟಡ ಉದ್ಘಾಟನಾ ಕಾರ್ಯಕ್ರಮ.ಸಂಜೆ 5 – ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂಗಾರು ಮಳೆಯ ಹಾನಿ ಮತ್ತು ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ, 6ಕ್ಕೆದ.ಕ. ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಭೆ, 7- ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕಟ್ಟಡ ನಿರ್ಮಿಸಲು ಆಗುವ ಸಮಸ್ಯೆಗಳ ಹಾಗೂ ಇತರೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಭೆ ನಡೆಸಲಿದ್ದಾರೆ.
ರಾತ್ರಿ 10 – ಸಚಿವರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.